alex Certify BIG NEWS : ರಾಜ್ಯದಲ್ಲಿ ಹೆಚ್ಚುತ್ತಿದೆ ಮಗು ಮಾರಾಟ ದಂಧೆ : ಮೂವರು ಆರೋಪಿಗಳು ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಹೆಚ್ಚುತ್ತಿದೆ ಮಗು ಮಾರಾಟ ದಂಧೆ : ಮೂವರು ಆರೋಪಿಗಳು ಅರೆಸ್ಟ್.!

ಬೆಳಗಾವಿ : ರಾಜ್ಯದಲ್ಲಿ ಮಗು ಮಾರಾಟ ದಂಧೆ ಜಾಲವೊಂದು ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ಹೌದು, ಹುಕ್ಕೇರಿ ತಾಲೂಕಿನ ಸುಲ್ತಾನ್ ಪುರದ ಅರ್ಚನಾ ಎಂಬುವವರ ಮಗುವನ್ನು ಖದೀಮರು 3 ಲಕ್ಷರೂಗೆ ಮಾರಾಟ ಮಾಡಿದ್ದರು. ಪ್ರಕರಣದ ಭೇದಿಸಿದ ಪೊಲೀಸರು ಸಂಗೀತ ತಾವಡೆ , ಮೋಹನ್ ತಾವಡೆ, ಸಂಗೀತ ಗೌಳಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ ; 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ ರೂ. ದಂಡ ಫಿಕ್ಸ್.!

ಮಕ್ಕಳನ್ನು ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ 5 ವರ್ಷಗಳವರೆಗೆ ಕಾರಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...