ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜೊತೆಗೆ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಜುಲೈ 12 ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ಭಾರಿ ಮಳೆಯ ಕಾರಣಕ್ಕೆ ತಗ್ಗಿನ ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ವ್ಯಾಪಕ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ದಿನಗಳಲ್ಲಿ ಮಳೆ ಪರಿಸ್ಥಿತಿಯನ್ನು ಅವಲೋಕಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಶಾಲಾ – ಕಾಲೇಜುಗಳ ರಜೆ ಕುರಿತಂತೆ ತೀರ್ಮಾನ ಕೈಗೊಳ್ಳಲಿದ್ದಾರೆ. ಅಲ್ಲದೆ ಒಂದೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾದರೆ ಅದನ್ನು ಎದುರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.