ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಳೆದ ವಾರ ರಾಜ್ಯ ಸರ್ಕಾರದ ಬಜೆಟ್ ಮಂಡಿಸಿದ್ದಾರೆ. ಈ ಬೆನ್ನಲ್ಲೇ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಸಿದ್ದತೆ ನಡೆಸಿದೆ. ಈ ಬಾರಿ 18 ಸಾವಿರ ಕೋಟಿ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ದತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 2025-26ರ ಬಜೆಟ್ 18,000 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ, ಇದು ರಾಜ್ಯ ಮತ್ತು ಕೇಂದ್ರ ಅನುದಾನಗಳ ಹೆಚ್ಚಳ ಮತ್ತು ಸುಧಾರಿತ ಆದಾಯ ಸಂಗ್ರಹದಿಂದ ಪ್ರೇರಿತವಾಗಿದೆ ಎಂದು ನಾಗರಿಕ ಸಂಸ್ಥೆಯ ಹಣಕಾಸು ಇಲಾಖೆಯ ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರದ 7000 ಕೋಟಿ ಅನುದಾನದ ನಿರೀಕ್ಷೆಯಲ್ಲಿ ಪಾಲಿಕೆಯಿದ್ದು, ಬಲ್ಲ ಮೂಲಗಳ ಪ್ರಕಾರ ಮಾ.20 ಅಥವಾ 21 ರಂದು ಆಯವ್ಯಯ ಮಂಡನೆ ಸಾಧ್ಯತೆಯಿದೆ. ಸತತ 5 ನೇ ವರ್ಷವೂ ಅಧಿಕಾರಿಗಳೇ ಆಯವ್ಯಯ ಮಂಡಿಸಲಿದ್ದಾರೆ. ಬಿಬಿಎಂಪಿ ಬಜೆಟ್ ನಲ್ಲಿ ಬ್ರ್ಯಾಂಡ್ ಬೆಂಗಳೂರಿಗೆ ವಿಶೇಷ ಅನುದಾನ ಮೀಸಲಿಡಲಾಗುತ್ತದೆ. ಕಳೆದ ವರ್ಷ 12,369.50 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಲಾಗಿತ್ತು,