ಕಲಬುರಗಿ : ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಪಮಾನ ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ಐಆರ್ ಗೆ ಕಲಬುರಗಿ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೂರು ಸಲ್ಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು.
ಎಫ್ಐಆರ್ ತಡೆಯಾಜ್ಞೆ ಕೋರಿ ಚಕ್ರವರ್ತಿ ಸೂಲಿಬೆಲೆ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್, ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.