ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾಜಿ ಸಚಿವ ಮನೋಹತ್ ತಹಸೀಲ್ದಾರ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಿನ್ನೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಜಿ ಸಚಿವರಾದ ಮನೋಹರ್ ತಹಸೀಲ್ದಾರ್ ಮತ್ತು ಅವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.