ಬೆಂಗಳೂರು : ಬಿಬಿಎಂಪಿ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.
ಹೌದು, ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ ಎಲ್ಲಾ ಎಂಟು ವಲಯಗಳಲ್ಲಿ ಅಧಿಕಾರಿ ಸಿಬ್ಬಂದಿಯ ಹಾಜರಾತಿಯನ್ನು ಮೊಬೈಲ್ ಆ್ಯಪ್ ಬಯೋಮೆಟ್ರಿಕ್ ಮೂಲದ ದಾಖಲಿಸಲು ಸೂಚನೆ ನೀಡಲಾಗಿದೆ.
ಕೆಲವು ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಆಗಮಿಸದ ಹಿನ್ನೆಲೆ ಮೊಬೈಲ್ ಆ್ಯಪ್ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಅಧಿಕಾರಿ ಸಿಬ್ಬಂದಿ ಲಾಗ್ ಸೇಪ್ ಸಂಸ್ಥೆ ಅಭಿವೃದ್ದಿಪಡಿಸಿದ ಮೊಬೈಲ್ ಆ್ಯಪ್ ನಲ್ಲಿ ಲಾಗಿನ್ ಆಗಿ ಬೆಳಗ್ಗೆ 10 ರೊಳಗೆ ಹಾಜರಾತಿ ನಮೂದಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.