alex Certify BIG NEWS: BJP ಜೊತೆ JDS ಒಪ್ಪಂದ ಮಾಡಿಕೊಂಡಿಲ್ಲ, ಆದರೆ….HDK ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ಜೊತೆ JDS ಒಪ್ಪಂದ ಮಾಡಿಕೊಂಡಿಲ್ಲ, ಆದರೆ….HDK ಹೇಳಿದ್ದೇನು….?

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಆದರೆ ಪರಿಷತ್ ಚುನಾವಣೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೇಳಿರುವುದು ನಿಜ. ಕಾಂಗ್ರೆಸ್ ಈವರೆಗೆ ನಮ್ಮ ಬೆಂಬಲ ಕೇಳಿಲ್ಲ ಎಂದು ಹೇಳಿದರು.

ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ನಮ್ಮ ಅಭ್ಯರ್ಥಿಗಳು 6 ಕಡೆ ಮಾತ್ರ ಸ್ಪರ್ಧಿಸಿದ್ದಾರೆ. ಉಳಿದ 19 ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ನಿಂತಿಲ್ಲ. ಹೀಗಾಗಿ ಸಹಕಾರ ನೀಡುವಂತೆ ಯಡಿಯೂರಪ್ಪ ನಮ್ಮ ಬೆಂಬಲ ಕೇಳಿದ್ದಾರೆ. ಬಿಜೆಪಿ ಬೆಂಬಲಿಸುವ ವಿಚಾರವಾಗಿ ಇನ್ನೆರಡು ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನಮ್ಮನ್ನು ಬಿಜೆಪಿ ಬಿ ಟೀಂ ಎಂದು ಕರೆಯುತ್ತಿದೆ. ಆದರೆ ಸಂಸತ್ ಚುನಾವಣೆ ವೇಳೆ ಯಾರು ಯಾರನ್ನು ಗೆಲ್ಲಿಸಿದರು? ಕಾಂಗ್ರೆಸ್ ನ್ನು ಯಾವ ಟೀಂ ಎಂದು ಕರೆಯಬೇಕು ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...