ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ಮಾತುಗಳು ಕೇಳಿಬರುತ್ತಿವೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಸುಧಾಕರ್, ನಾನು ಇದರ ಬಗ್ಗೆ ಹೇಳಿಕೆ ಕೊಡುವುದು ಸರಿಯಲ್ಲ. ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ಕಟೀಲ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಟೀಲ್ ನಾಯಕತ್ವದಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ಕಟೀಲ್ ಅವರೇ ಮುಂದುವರೆದರೆ ನನಗೂ ಸಂತೋಷ. ಆದರೆ ಎಲ್ಲವೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದರು.