alex Certify BIG NEWS: BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್….?

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ ಟಿಕೆಟ್ ನೀಡುವುದಾಗಿ ಡಿ.ಕೆ. ಶಿವಕುಮಾರ್ ಕೂಡ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಸುಮಲತಾ, ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿದ್ದು, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...