alex Certify BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸುಮಾರು ಆರು ತಿಂಗಳಿಂದ ಬಾಕಿ ಉಳಿದಿರುವ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ.ಹೈಕಮಾಂಡ್ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಇರಲಿದ್ದು, ಇಂದೇ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.

ಶಾಸಕರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರ ಹೆಸರುಗಳು ವಿಪಕ್ಷ ನಾಯಕನ ಹುದ್ದಗೆ ಕೇಳಿಬರುತ್ತಿದ್ದು, ಇಂದು ಈ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ಶಾಸಕರ ಸಮ್ಮುಖದಲ್ಲಿ ವಿಪಕ್ಷ ನಾಯಕರ ಘೋಷಣೆ ನಿರೀಕ್ಷೆಯಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...