ಹಾಸನ : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಯತ್ನಿಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ಮಾಡಿದೆ. ಆದರೆ, ಕಾಂಗ್ರೆಸ್ ಶಾಸಕರು ರೂ ಇದಕ್ಕೆ ಬಗ್ಗಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.