ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.