alex Certify BIG NEWS: BMTC ಬಸ್ ಹರಿದು ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BMTC ಬಸ್ ಹರಿದು ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ ಶಿಲ್ಪಾ ಬೆಂಗಳೂರು ವಿವಿಯಲ್ಲಿ ಮೊದಲ ವರ್ಷದ ಉನ್ನತ ವ್ಯಾಸಂಗ ಮಾಡುತ್ತಿದ್ದರು.

ಅಕ್ಟೋಬರ್ 10ರಂದು ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯ ಬಳಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದ ವಿದ್ಯಾರ್ಥಿನಿ ಶಿಲ್ಪಾ ಮೇಲೆಯೇ ಬಸ್ ಹರಿದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಬನ್ನೇರುಘಟ್ಟದ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಶಿಲ್ಪಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸ್ಟೂಡೆಂಟ್ ಯೂನಿಯನ್ ಎಚ್ಚರಿಕೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...