ಬೆಂಗಳೂರು : ಫೆಬ್ರವರಿ 27 ಇಂದಿನಿಂದ ಮಾರ್ಚ್ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದೆ.
ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಹಾಗೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ.