ಬೆಂಗಳೂರು : ಬ್ಯಾಂಡ್ ಬೆಂಗಳೂರು ಯೋಜನೆಯಡಿ 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು 1,800 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ . ಈ ಬಗ್ಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ‘ಬ್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂ. ವೆಚ್ಚದಲ್ಲಿ ‘ಸಮಗ್ರ ಆರೋಗ್ಯ ಯೋಜನೆ ಯನ್ನು ಜಾರಿಗೊಳಿಸಲಾಗುವುದು.
ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರು ನಗರವು ಎದುರಿಸುತ್ತಿರುವ ಪ್ರವಾಹವನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ಗಳನ್ನು ನಿರ್ಮಿಸಲು ಸರ್ಕಾರವು BBMP ಹಾಗೂ BWSSB ಗೆ 3,000 ಕೋಟಿ ರೂ. ಆರ್ಥಿಕ ನೆರವು ನೀಡಲು ತೀರ್ಮಾನಿಸಿದೆ.