ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಸಿಬಿಐ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಸಿಬಿಐ ಅಧಿಕಾರಿಗಳು ನನಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ಇರಲು ನನಗೆ ಕೋರ್ಟ್ ಅನುಮತಿ ನೀಡಿದೆ. ಕಳೆದ 14 ತಿಂಗಳುಗಳಿಂದ ನಾನು ಬಳ್ಳಾರಿಯಲ್ಲಿ ಯೇ ಇದ್ದೇನೆ. ಆದರೆ ಸಿಬಿಐ ಅಧಿಕಾರಿಗಳು ಅನಗತ್ಯವಾಗಿ ತೊಂದರೆ ಮಾಡುತ್ತಿದ್ದಾರೆ ಎಂದರು.
ಸಿಬಿಐ ಅಧಿಕಾರಿಗಳು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಿದ್ದಾರೆ. ಪದೇ ಪದೇ ಅನಗತ್ಯವಾಗಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.