![](https://kannadadunia.com/wp-content/uploads/2023/06/dk-shivakumar16465625671647102728.jpg)
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೊರೆ ಹೋಗಿದೆ.
ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಪ್ರರಕಣದ ತನಿಖೆಯನ್ನು ರಾಜ್ಯ ಸರಕಾರವು ಸಿಬಿಐನಿಂದ ವಾಪಸ್ ಪಡೆದಿದೆ. ಸರಕಾರದ ಈ ನಿಲುವನ್ನು ಪ್ರಶ್ನಿಸಿರುವ ಸಿಬಿಐ, ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶಿಸಿತ್ತು. ಈ ಮಧ್ಯೆ ಹಾಲಿ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಅದಕ್ಕೆ ಆಕ್ಷೇಪಿಸಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಲಾಗಿದೆ.