ಬೆಂಗಳೂರು : ಮಾ.22 ಕ್ಕೆ ನಿಗದಿಯಾಗಿರುವ ‘ಕರ್ನಾಟಕ ಬಂದ್’ ಮುಂದೂಡಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಸಲ್ಲಿಸಿದ್ದಾರೆ.
ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮಾ.22 ಕ್ಕೆ ನಿಗದಿಯಾಗಿರುವ ಕರ್ನಾಟಕ ಬಂದ್ ದಿನಾಂಕವನ್ನು ಮುಂದೂಡುವಂತೆ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಬಂದ್ ಮಾಡಿದರೆ ಆಟೋ, ಬಸ್ ಸಂಚಾರ ಇರಲ್ಲ, ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದ್ದಾರೆ.
1 ರಿಂದ 9 ನೇ ತರಗತಿ ಮಕ್ಕಳಿಗೆ ವಿವಿಧ ಪರೀಕ್ಷೆ ನಡೆಯಲಿದೆ. ಬಂದ್ ವೇಳೆ ಮಕ್ಕಳಿಗೆ ಶಾಲೆಗಳಿಗೆ ರಜೆ ಕೊಡುವುದಕ್ಕೆ ಆಗಲ್ಲ. ಮಕ್ಕಳ ಹಿತದೃಷ್ಟಿಯಿಂದ ಬಂದ್ ದಿನಾಂಕ ಬದಲಾಯಿಸುವಂತೆ ಅವರು ಮನವಿ ಮಾಡಿದ್ದಾರೆ.