ಬೆಂಗಳೂರು : ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕೇಸ್ ಗೆ ಸಿಐಡಿ ಎಂಟ್ರಿ ಕೊಟ್ಟಿದ್ದು, ಶೀಘ್ರದಲ್ಲೇ ಸಚಿವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಈಗಾಗಲೇ ಸಿಐಡಿ ವಿಚಾರಣೆ ಆರಂಭಿಸಿದ್ದು, ಕೇಸ್ ಬಗ್ಗೆ ವಿವರ ಕಲೆ ಹಾಕಲು ಸಚಿವರಿಗೆ ನೋಟಿಸ್ ನೀಡಲು ಮುಂದಾಗಿದೆ.
ಹನಿಟ್ರ್ಯಾಪ್ ಯತ್ನ ಆರೋಪದ ಕುರಿತು ವಿವರಣೆ ನೀಡುವಂತೆ ಸೂಚಿಸಿ ರಾಜಣ್ಣಗೆ ಸಿಐಡಿ ನೋಟಿಸ್ ನೀಡಲು ಮುಂದಾಗಿದ್ದು, ಶುಕ್ರವಾರ ಅಥವಾ ಶನಿವಾರ ವಿಚಾರಣೆ ನಡೆಯುವ ಸಾಧ್ಯತೆಗಳಿದೆ.ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಾಜಣ್ಣ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿತ್ತು. ಈ ವೇಳೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ನಾನು ಹೇಳಿದ್ದೆವು. ಈಗ ಸಚಿವರು ಮನವಿ ಸಲ್ಲಿಸಿದ್ದಾರೆ ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.