ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಇಂದಿನಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರು, ಗುರುವಾರ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ, ಶುಕ್ರವಾರ, ಶನಿವಾರ, ಸೋಮವಾರ ಮತ್ತು ಮುಂದಿನ ಗುರುವಾರ ಮತ್ತಷ್ಟು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮಾ.7 ರಂದು ಅಥವಾ 14 ರಂದು ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಸಿಎಂ ಸಿದ್ದರಾಮಯ್ಯ ಅವರು ಮಂಡಿನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದು, 2 ದಿನ ಎಲ್ಲಾ ಕಾರ್ಯಕ್ರಮ ರದ್ದಾಗಿತ್ತು. ಮಂಡಿ ನೋವು ಕಡಿಮೆಯಾದ ಹಿನ್ನೆಲೆ ಇಂದಿನಿಂದ ಸಿಎಂ ಮತ್ತೆ ತಮ್ಮ ಕೆಲಸದಲ್ಲಿ ತೊಡಗಲಿದ್ದಾರೆ.