ಬೆಂಗಳೂರು: ಜಾನಪದ ಗಾಯಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತೆ ‘ಸುಕ್ರಿ ಬೊಮ್ಮಗೌಡ’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ.
ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ.
ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ… pic.twitter.com/PEajjzXuEQ
— Siddaramaiah (@siddaramaiah) February 13, 2025