alex Certify BIG NEWS : ಈ ಬಾರಿ ಮೈಸೂರಿನಲ್ಲಿ ಅದ್ಧೂರಿ ‘ದಸರಾ ಮಹೋತ್ಸವ’ ನಡೆಸಲು ನಿರ್ಧಾರ-CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಈ ಬಾರಿ ಮೈಸೂರಿನಲ್ಲಿ ಅದ್ಧೂರಿ ‘ದಸರಾ ಮಹೋತ್ಸವ’ ನಡೆಸಲು ನಿರ್ಧಾರ-CM ಸಿದ್ದರಾಮಯ್ಯ

ಮೈಸೂರು : ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಸರಾ ಮಹೋತ್ಸವ ಆಯೋಜನೆಯ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...