ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ಕಲಬುರಗಿಯಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
ವಿಧಾನಸೌಧದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕೆಲವು ಮಹತ್ವದ ಸೂಚನೆಗಳನ್ನು ನೀಡಿದರು.
ಆಗಸ್ಟ್ ತಿಂಗಳಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಾಗೂ ವಿಧಾನಸಭೆ ಅಧಿವೇಶನ ಮುಗಿದ ಬಳಿಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕೂಡ ಜಿಲ್ಲಾಧಿಕಾರಿಗಳು ಜನಸ್ಪಂದನ ಕಾರ್ಯಕ್ರಮ ನಡೆಸಬೇಕು, ಜನರ ಅಹವಾಲು ಸ್ವೀಕರಿಸಬೇಕು ಎಂದು ಹೇಳಿದರು.
ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ? ಡಿ.ಸಿ ಹಾಗೂ ಸಿ.ಇ.ಒ ಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದಕ್ಕೆ ಕಳಿಸಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ? ಪರಿಹಾರ ಕೊಡಿಸುವವರು ಯಾರು? ನೀವು ಸಮಸ್ಯೆಗೆ ಪರಿಹಾರ ಕೊಡಲಿಲ್ಲ ಎಂದು ಜನರು ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ಡಿ.ಸಿ ಹಾಗೂ ಸಿ.ಇ.ಒ ಗಳ ವಿರುದ್ಧ ಕ್ರಮ ಖಚಿತ ಎಂದರು. ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ? ಡಿ.ಸಿ ಹಾಗೂ ಸಿ.ಇ.ಒ ಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದಕ್ಕೆ ಕಳಿಸಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ? ಪರಿಹಾರ ಕೊಡಿಸುವವರು ಯಾರು? ನೀವು ಸಮಸ್ಯೆಗೆ ಪರಿಹಾರ ಕೊಡಲಿಲ್ಲ ಎಂದು ಜನರು ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ಡಿ.ಸಿ ಹಾಗೂ ಸಿ.ಇ.ಒ ಗಳ ವಿರುದ್ಧ ಕ್ರಮ ಖಚಿತ ಎಂದು ಸಿಎಂ ಖಡಕ್ ಸೂಚನೆ ನೀಡಿದರು.