alex Certify BIG NEWS : ‘ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ.

ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಸಭೆಯಲ್ಲಿ ಗೃಹಸಚಿವರಾದ ಡಾ|| ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...