
ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರಗಳ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಅವರ ಜೊತೆಗಿನ ಸಭೆಯಲ್ಲಿ ಬರಪರಿಹಾರದ ಜೊತೆಗೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ರಿಂದ 150 ದಿನಕ್ಕೆ ಹೆಚ್ಚಳ ಮಾಡುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.