ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ನಾಳೆ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.
ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಮಾರ್ಚ್ 4 ರಿಂದ ಇಂದಿನವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.
ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.