ಬಳ್ಳಾರಿ : ನಾಳೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ ಪ್ರವಾಸ ಕೈಗೊಳ್ಳಲಿದ್ದು,, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.08 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.ಡಿ.08 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ನಿರ್ಗಮಿಸಿ ಬೆಳಿಗ್ಗೆ 10.50 ಕ್ಕೆ ತೋರಣಗಲ್ನ ಜಿಂದಾಲ್ನ ಏರ್ಸ್ಟಿçಪ್ ಗೆ ಆಗಮಿಸುವರು.
ನಂತರ ಬೆಳಿಗ್ಗೆ 11 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟಿçಪ್ನಿಂದ ಹೊರಟು, 11.15 ಗಂಟೆಗೆ ಸಂಡೂರು ಪಟ್ಟಣದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಕೆ ಸಮಾರಂಭದಲ್ಲಿ ಭಾಗವಹಿಸುವರು.ಬಳಿಕ ಮಧ್ಯಾಹ್ನ 02.30 ಗಂಟೆಗೆ ಅಲ್ಲಿಂದ ಹೊರಟು, 02.45 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟಿçಪ್ಗೆ ಆಗಮಿಸಿ, 02.50 ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.