alex Certify BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಸಚಿವ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆದಿದ್ದು, ವಿದ್ಯುತ್ ಅಭಾವ, ಲೋಡ್ ಶೆಡ್ಡಿಂಗ್ ಸಮಸ್ಯೆಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ನಂತರ ಮಾತನಾಡಿದರು.

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ. ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ.

ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ ಎಂದರು.

ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...