![](https://kannadadunia.com/wp-content/uploads/2024/01/karntaka-govrment-1.jpg)
ಬೆಂಗಳೂರು : ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ಸಂಬಂಧ ಗೌರವಾನ್ವಿತ ರಾಜ್ಯಪಾಲರು ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆಯುವಂತೆ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಅಧಿವೇಶನ ಪ್ರಾರಂಭವಾದ ಹಿನ್ನೆಲೆ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದು ಕಾನೂನಿನ ರೂಪದಲ್ಲಿ ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ನಮ್ಮ ನಿಲುವು ಅಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.