
ಆದರೆ, ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಪವನ್ ಖೇರಾ ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ಪಕ್ಷ ಮತಗಟ್ಟೆ ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ಚರ್ಚೆಯ ಗುರಿ ಸಾರ್ವಜನಿಕರಿಗೆ ಮಾಹಿತಿ ನೀಡುವುದಾಗಿದ್ದು, ಜೂನ್ 4 ರ ಫಲಿತಾಂಶದ ಬಳಿಕ ನಾವು ಚರ್ಚೆಗಳಲ್ಲಿ ಸಂತೋಷದಿಂದ ಭಾಗವಹಿಸುತ್ತೇವೆ ಎಂದು ತಿಳಿಸಿರುವ ಅವರು, ಈ ತೀರ್ಮಾನವನ್ನು ಪಕ್ಷದೊಳಗೆ ಆಂತರಿಕವಾಗಿ ಚರ್ಚಿಸಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.