ನವದೆಹಲಿ : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 12 ರ ಇಂದು ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಲಿದೆ.
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿ ಸಂಸದ ಸ್ಥಾನ ವಜಾ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನೂ ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. 2019 ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ, ಮೋದಿ ಉಪನಾಮವನ್ನು ಬಳಸಿಕೊಂಡು ವಾಗ್ದಾಳಿ ನಡೆಸಿದ್ದರು. ಈ ಕುರಿತಂತೆ ಮಾನನಷ್ಟ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದಲ್ಲಿ ಸೂರತ್ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯನ್ನು 2023ರ ಮಾರ್ಚ್ನಲ್ಲಿ ದೋಷಿ ಎಂದು ತೀರ್ಪು ನೀಡಿತ್ತು, ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ನಂತರ ಮಾರ್ಚ್ 24ರಂದು ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು.