ಬೆಂಗಳೂರು: ಕಾಂಗ್ರೆಸ್ ನಾಯಕರು ವೀಕೆಂಡ್ ಕರ್ಫ್ಯೂ, ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಾಗಿ ಸಮಸ್ಯೆಯಾದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆಯಾಗುತ್ತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೊನಾ ಕೇಸ್ ಹೆಚ್ಚಾದರೆ, ಮತ್ತೆ ತಿಂಗಳುಗಟ್ಟಲೆ ಲಾಕ್ ಡೌನ್ ಜಾರಿ ಮಾಡಬೇಕಾದ ಪರಿಸ್ಥಿತಿ ಬಂದರೆ ಅದಕ್ಕೆ ಕಾಂಗ್ರೆಸ್ ನವರೇ ಹೊಣೆ. ಈಗಾಗಲೇ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಇಂತಹ ನಡೆ ಸರಿಯಲ್ಲ ಎಂದು ಗುಡುಗಿದರು.
80 ನೇ ಹುಟ್ಟುಹಬ್ಬದಂದು ವೃದ್ದನಿಂದ 80 ನೇ ಐಷಾರಾಮಿ ಕಾರು ಖರೀದಿ..!
ಜನರ ಪ್ರಾಣ ಉಳಿಸುವುದು ಮುಖ್ಯ. ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ಬೆಂಗಳೂರು ರಕ್ಷಣೆಗಾಗಿ ಸರ್ಕಾರ ಬದ್ಧವಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಬೆಂಗಳೂರಿಗೆ ಎಂಟ್ರಿ ಕೊಡಲು ಬಿಡುವುದಿಲ್ಲ. ಜನರ ಹಿತದ ದೃಷ್ಟಿಯಿಂದ ಬೆಂಗಳೂರಿನ ಹೊರಗೆ ಪಾದಯಾತ್ರೆ ತಡೆಯಲಾಗುವುದು ಎಂದು ಹೇಳಿದರು.