ಹಾಸನ ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿದಿನ ಈ ಯೋಗಾಸನ ಮಾಡಿದರೆ ನಿಮ್ಮನ್ನು ಕಾಡಲ್ಲ ಕೂದಲುದುರುವ ಸಮಸ್ಯೆ
ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. 20ಕ್ಕೂ ಹೆಚ್ಚು ಶಾಲೆಗಳಿಗೆ ಕೊರೊನಾ ಸೋಂಕು ಹರಡಿದೆ. ಪ್ರತಿ ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ. ಆದರೂ ಕೂಡ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸುವುದಾಗಲಿ, ಮಕ್ಕಳ ಆರೋಗ್ಯದ ಬಗ್ಗೆ ನಿಗಾವಹಿಸುವುದಾಗಿ ಮಾಡದೇ ಕಣ್ಮುಚ್ಚಿ ಕುಳಿತಿದೆ.
ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಇದೀಗ ಶಿಕ್ಷಕರು, ಪೋಷಕರಲ್ಲಿಯೂ ಕೋವಿಡ್ ಭೀತಿ ಎದುರಾಗಿದೆ. ಒಟ್ಟಾರೆ ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕದ ವಾತಾವರಣ ನಿರ್ಮಾಣವಾಗಿದೆ.