ಬಳ್ಳಾರಿ: ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಮೊರಾರ್ಜಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಯರಂಗಳ್ಳಿ ಗ್ರಾಮದಲ್ಲಿ ನಡೆದಿದೆ.
236 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವಸತಿ ಶಾಲೆಯಲ್ಲಿಯೇ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. 35 ವಿದ್ಯಾರ್ಥಿಗಳು, 11 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿದೆ.
BIG NEWS: ಕರ್ಫ್ಯೂ ವಿಸ್ತರಣೆ ಬಗ್ಗೆ ಸಚಿವ ಡಾ. ಸುಧಾಕರ್ ಹೇಳಿದ್ದೀಗೆ….
ಮುಂಜಾಗೃತಾ ಕ್ರಮವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನೇ ಸೀಲ್ ಡೌನ್ ಮಾಡಲಾಗಿದೆ.