alex Certify BIG NEWS : ರಾಜ್ಯದಲ್ಲಿ ಕೊರೊನಾ ಆತಂಕ : ಸಂಪುಟ ಉಪಸಮಿತಿ ಸಭೆಯ ಪ್ರಮುಖ ನಿರ್ಣಯಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಕೊರೊನಾ ಆತಂಕ : ಸಂಪುಟ ಉಪಸಮಿತಿ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ದಿನೇಶ್‌ ಗುಂಡೂರಾವ್ ಅಧ್ಯಕ್ಷತೆಯಲ್ಲಿ  ಸಚಿವ ಸಂಪುಟ ಉಪ ಸಮಿತಿಯ ಮೊದಲ ಸಭೆ ನಡೆಸಿದೆ.

ಸಭೆಯ ಪ್ರಮುಖ ಅಂಶಗಳು

  • ಕೇಂದ್ರದಿಂದ 30,000 ಕೋವಿಡ್ ಲಸಿಕೆ ಪಡೆದುಕೊಳ್ಳಲು ನಿರ್ಧಾರಿಸಲಾಗಿದೆ.
  • ಮಕ್ಕಳಲ್ಲಿ ವೇಗವಾಗಿ ರೋಗ ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆ ಮಾಡಬೇಕು.
  • ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು.
  • ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 400 ಜನ ಮನೆಯಲ್ಲಿ ಐಸೋಲೇಷನಲ್ಲಿದ್ದಾರೆ. ಇವರ ಮೇಲೆ ನಮ್ಮ ವೈದ್ಯರು ನಿಗಾ ವಹಿಸಲಿದ್ದು, ಮನೆಗಳಿಗೆ ಭೇಟಿ ಮಾಡಿ ತಪಾಸಣೆ ನಡೆಸಲಿದ್ದಾರೆ. ಅಗತ್ಯವೆನಿಸಿದರೆ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ತಪಾಸಣೆ ನಡೆಸಲಿದ್ದಾರೆ.
  • ಆರೋಗ್ಯ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಫ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.
  • ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ  ಯಾವುದೇ ನಿರ್ಬಂಧ ಹೇರುವುದಿಲ್ಲ. ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...