alex Certify BIG NEWS : ಕೊರೊನಾ ಆತಂಕ : ರಾಜ್ಯದಲ್ಲಿ ಗರ್ಭಿಣಿಯರು, ಬಾಣಂತಿಯರಿಗೂ ʻಮಾಸ್ಕ್ʼ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೊರೊನಾ ಆತಂಕ : ರಾಜ್ಯದಲ್ಲಿ ಗರ್ಭಿಣಿಯರು, ಬಾಣಂತಿಯರಿಗೂ ʻಮಾಸ್ಕ್ʼ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಆರೋಗ್ಯ ಇಲಾಖೆಯು ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಮಾರ್ಗಸೂಚಿ ಹೊರಡಿಸಿದ್ದು, ಕೇರಳದಲ್ಲಿ ಕೊರೊನಾ ಹೊಸ ರೂಪಾಂತರಿ ಪತ್ತೆ ಹಾಗೂ ದೇಶಾದ್ಯಂತ ಹೊಸ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಮಾಸ್ಕ್‌ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ

ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...