alex Certify BIG NEWS : ʻPDOʼ ಸೇರಿ ಇತರ ನೌಕರರ ವರ್ಗಾವಣೆಗೆ ಕೌನ್ಸೆಲಿಂಗ್ ಮಾದರಿ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ʻPDOʼ ಸೇರಿ ಇತರ ನೌಕರರ ವರ್ಗಾವಣೆಗೆ ಕೌನ್ಸೆಲಿಂಗ್ ಮಾದರಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪಿಡಿಒ ಹಾಗು ಇತರ ನೌಕರರ ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳೊಂದಿಗೆ ಪಿಡಿಒ ಹಾಗು ಇತರ ನೌಕರರ ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಖಾತೆಯನ್ನು ವಹಿಸಿಕೊಂಡ ಆರಂಭದಲ್ಲಿಯೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ಕಾರ್ಯದರ್ಶಿಗಳ ವರ್ಗಾವಣೆಗಳಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಕೌನ್ಸೆಲಿಂಗ್‌ ಪದ್ಧತಿಯನ್ನು ಜಾರಿಗೆ ತರುವುದಾಗಿ ಹೇಳಿದ್ದೆ. ಈಗ ಪೂರಕ ಚಟುವಟಿಕೆಗಳು ಆರಂಭಗೊಂಡಿದ್ದು ಈ ಕುರಿತು ಸೇವಾ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯ ಹಂತ ತಲುಪಿದೆ ಎಂದು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೇ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ಸೇವಾ ನಿಯಮಗಳನ್ನು ರೂಪಿಸುತ್ತಿದೆ ಎಂದು ಹೇಳಿದ್ದಾರೆ.

ನೌಕರರ ಹಾಗೂ ಸರ್ಕಾರದ ಹಿತದೃಷ್ಟಿಯನ್ನು ಇರಿಸಿಕೊಂಡು ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗಳನ್ನು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೊಳಿಸಲಾಗುವುದು, ಪಂಚಾಯತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...