ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022 ರ ಭಾರತ್ ಜೋಡೋ ರ್ಯಾಲಿಯಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಹಾಜರಾಗದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಲಕ್ನೋದ ನ್ಯಾಯಾಲಯ ಬುಧವಾರ 200 ರೂ.ಗಳ ದಂಡ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ಈ ಆದೇಶ ಹೊರಡಿಸಿದ್ದಾರೆ. ಮಾರ್ಚ್ 5 ರಂದು (ಬುಧವಾರ) ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿ ವಿಫಲರಾದರು, ಆದ್ದರಿಂದ ನ್ಯಾಯಾಲಯವು ದಂಡ ವಿಧಿಸಿದೆ. ‘ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಅಲ್ಲದೆ, ಕ್ಷಮಾದಾನ ಕೋರಿ ಪತ್ರವನ್ನೂ ಬರೆದಿದ್ದರು,” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.