ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿನ ಆತಂಕ ಸೃಷ್ಟಿಯಾಗಿರುವ ನಡುವೆಯೇ ರಾಜ್ಯದಲ್ಲಿ ಒಂದೇ ವಾರದಲ್ಲಿ 81 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 81 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಒಂದು ವಾರದಲ್ಲಿ 2,619 ಮಂದಿಯನ್ನು ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 81 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ನಿನ್ನೆ ಒಂದೇ ದಿನ 260 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳು 1,828 ಕ್ಕೆ ಏರಿದೆ. ಕೇರಳದಲ್ಲಿ ಕೊರೊನ ವೈರಸ್ಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 5,33,317 ಕ್ಕೆ ತಲುಪಿದೆ.
ಇದಲ್ಲದೆ, ಭಾರತದ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,05,076) ಆಗಿದೆ. ಮತ್ತು ಚೇತರಿಕೆಗಳು 4,44,69,931 ಕ್ಕೆ ಏರಿದೆ, ಇದು ರಾಷ್ಟ್ರೀಯ ಚೇತರಿಕೆ ಪ್ರಮಾಣವನ್ನು ಶೇಕಡಾ 98.81 ಕ್ಕೆ ತಂದಿದೆ ಎಂದು ಆರೋಗ್ಯ ಸಚಿವಾಲಯದ ವೆಬ್ಸೈಟ್ನಲ್ಲಿ ತಿಳಿಸಲಾಗಿದೆ.