ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿಯು ಡಿಸೆಂಬರ್ 26ರ ಇಂದು ಸಭೆ ನಡೆಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಕೊರೊನಾ ಪ್ರಕರಣಗಳ ಬಗ್ಗೆ ಜನರು ಜಾಗರೂಕರಾಗಿರಬೇಕು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳು ಇರುವುದಿಲ್ಲ. ಜೆಎನ್.1 ಉಪವಿಭಾಗವು ಎಲ್ಲೆಡೆ ಪ್ರಚಲಿತದಲ್ಲಿದ್ದರೂ ದೇಶ ಅಥವಾ ಜಗತ್ತಿನಲ್ಲಿ ಎಲ್ಲಿಯೂ ಯಾವುದೇ ನಿರ್ಬಂಧವಿಲ್ಲ. ಅಂತಹ ಯಾವುದೇ ನಿರ್ಬಂಧಗಳಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಇತ್ತೀಚೆಗೆ ಕೋವಿಡ್-19 ನಿರ್ವಹಣೆಗಾಗಿ ದಿನೇಶ್ ಗುಂಡೂರಾವ್ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಮಿತಿಯು ಮಹತ್ವದ ಸಭೆ ನಡೆಸಲಿದೆ ಎಂದು ಹೇಳಿದ್ದಾರೆ.