ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನ ಕುಪ್ಪಳಿ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಅಂಗವಾಗಿ ಡಿ. 29 ರಂದು ಬೆಳಗ್ಗೆ 10 ಗಂಟೆಗೆ ಕವಿ ಶೈಲದದಲ್ಲಿ ಕವಿ ನಮನ ಹಾಗೂ ಬೆಳಗ್ಗೆ 11 ಗಂಟೆಗೆ ಕುಪ್ಪಳಿಯ ಹೇಮಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಶ್ರೀ ರಾಮಾಯಣ ದರ್ಶನಂ ಕೃತಿ ಬಿಡುಗಡೆಯನ್ನು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೆರೆವೇರಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಘನ ಉಪಸ್ಥಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಇವರ ವಿಶೇಷ ಉಪಸ್ಥಿತಿ ಇರಲಿದೆ. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ವಿಧಾನಸಭೆ ಶಾಸಕರಾದ ಬಿ.ಕೆ ಸಂಗಮೇಶ್ವರ ಮತ್ತು ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ಸಂಸದರು, ವಿಧಾನ ಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ದೇವಂಗಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು. ಡಿ. 29 ರಂದು ಸಂಜೆ 6 ಗಂಟೆಗೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕುವೆಂಪು ನಾಟಕಗಳನ್ನು ಪ್ರದರ್ಶಿಸಲಾಗುವುದು.