ಬೆಂಗಳೂರು : ಅಂದು ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಮಾತನಾಡಿದರು.
ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜೊತೆಗೆ ಅವರು ನೆಂಟಸ್ಥನ ಮಾಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು.
ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎನ್ನುವ ಹೆಚ್ಡಿಕೆ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಎನ್ನುತ್ತಾರೆ, ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಎಂದು ಡಿಸಿಎಂ ಡಿಕೆಶಿ ಹೇಳಿದರು.