ಬೆಂಗಳೂರು: ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಿಸಿಪಿ ನಿಶಾ ಜೇಮ್ಸ್ ವಿರುದ್ಧ ಕಚೇರಿ ಸಿಬ್ಬಂದಿಗಳು ಕಿರುಕುಳ ಆರೋಪ ಮಾಡಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನಿಶಾ ಜೇಮ್ಸ್ ಅವರನ್ನು ವರ್ಗಾವಣೆ ಮಾಡಿ ಕ್ರಮ ಕೈಗೊಂಡಿದೆ.
ಬೆಂಗಳೂರು ಪೊಲೀಸ್ ಆಡಳಿತ ವಿಭಾಗಕ್ಕೆ ಬಿ.ಎಂ.ಲಕ್ಷ್ಮಿ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದ್ದು, ನಿಶಾ ಅವರನ್ನು ಐಎಸ್ ಡಿಗೆ ವರ್ಗಾವಣೆ ಮಾಡಲಾಗಿದೆ.