alex Certify BIG NEWS : ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ : ನಟ ದರ್ಶನ್ ಬಗ್ಗೆ ಸುಮಲತಾ ಫಸ್ಟ್ ರಿಯಾಕ್ಷನ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ : ನಟ ದರ್ಶನ್ ಬಗ್ಗೆ ಸುಮಲತಾ ಫಸ್ಟ್ ರಿಯಾಕ್ಷನ್.!

ಬೆಂಗಳೂರು : ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ನಟ ದರ್ಶನ್ ಬಗ್ಗೆ ಸುಮಲತಾ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.

ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ.

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಅವರು ಪೋಸ್ಟ್ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...