alex Certify BIG NEWS : ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ, ಇಲ್ಲಿದೆ ಮಾಹಿತಿ

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು.

ಉಪಯೋಗಗಳು

ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ.ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...