alex Certify BIG NEWS: ED ಕಚೇರಿಗೆ ಹಾಜರಾದ ರಾಹುಲ್ ಗಾಂಧಿ; ಮೂರು ಅಧಿಕಾರಿಗಳಿಂದ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ED ಕಚೇರಿಗೆ ಹಾಜರಾದ ರಾಹುಲ್ ಗಾಂಧಿ; ಮೂರು ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರವಾಗಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದೀಗ ರಾಹುಲ್ ಗಾಂಧಿ, ದೆಹಲಿಯ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿಗೆ ಹಾಜರಾಗಿ, ಅಧಿಕಾರಿಗಳಿಗೆ ಇಡಿ ಸಮನ್ಸ್ ತೋರಿಸಿದ್ದಾರೆ.

ಜಾರಿ ನಿರ್ದೇಶನಾಲಯದ ಅಸಿಸ್ಟೆಂಟ್ ಡೈರೆಕ್ಟರ್ ದರ್ಜೆ ಮೂವರು ಅಧಿಕಾರಿಗಳು ರಾಹುಲ್ ಗಾಂಧಿ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ಇಡಿ ಸಮನ್ಸ್ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ವಿಚಾರಣೆ ಮುಗಿಸಿ ಹೊರಬರುವವರೆಗೂ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...