ಬೆಂಗಳೂರು : ಅತಿಯಾದ ಕೆಲಸದ ಒತ್ತಡದ ಸಹಿಸದೇ ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗ್ರಾಮ ಲೆಕ್ಕಾಧಿಕಾರಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ಬ್ರೈನ್ ಹ್ಯಾಮರೇಜ್, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಕೆಲಸದ ಒತ್ತಡ ತಾಳಲಾರದೇ 50 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯಾದ್ಯಂತ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸಕ್ಕೆ ಗೈರಾಗಿ ಆಯಾ ತಹಶಿಲ್ದಾರರ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ.
ಮೇಲಾಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳಿಗೆ ತೀವ್ರ ಕೆಲಸದ ಒತ್ತಡ ಹೇರುತ್ತಿದ್ದಾರೆ. ಕೆಲಸ ಮಾಡುವುದಕ್ಕೆ ಸರಿಯಾದ ಮೂಲಭೂತ ಸೌಲಭ್ಯಗಳೂ ಇಲ್ಲ. ಹಿರಿಯ ಅಧಿಕಾರಿಗಳು ಪ್ರತಿದಿನ ಸಂಜೆ 7 ಗಂಟೆಯ ನಂತರ ವಿಡಿಯೋ ಕಾನ್ಪರೆನ್ಸ್ ತಗೊಂಡು ಕೊಟ್ಟ ಕೆಲಸ ಮಾಡಿಲ್ಲ ಎಂದು ಟಾರ್ಚರ್ ನೀಡುತ್ತಾರೆ ಕಿಡಿಕಾರಿದ್ದಾರೆ.