alex Certify BIG NEWS : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿದ್ದು, ಈ ತಂತ್ರಾಂಶದ ಸಂಯೋಜನೆಯನ್ನು ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಿಲಾಗಿದೆ. (18 ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಉಡುಪಿ, ಕಾರವಾರ, ಮಂಗಳೂರು, ಧಾರವಾಡ, ವಿಜಯಪುರ, ವಿಜಯನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಯಾದಗಿರಿ, ತುಮಕೂರು, ಶಿವಮೊಗ್ಗ, ಕೋಲಾರ, ಕಲಬುರಗಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ)

ದಿನಾಂಕ:07-10-2024 ರಿಂದ – ತಂತ್ರಾಂಶ ಹಾಗೂ ಕಾವೇರಿ-2 ತಂತ್ರಾಂಶದ ಸಂಯೋಜನೆಯಿಂದ ಮಾತ್ರ ಮಾಹಿತಿ ಪಡೆದು ನೋಂದಾಯಿಸಲು ಆದೇಶಿಸಿದೆ. ಈ ವ್ಯವಸ್ಥೆಯನ್ನು ನೋಂದಣಿಗಾಗಿ ಅನುಷ್ಠಾನಗೊಳಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಎಲ್ಲಾ ಅಗತ್ಯ ಕ್ರಮ ವಹಿಸುವುದು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯದೇ ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ ಮಾಡಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ/ ನೌಕರರ ವಿರುದ್ಧ ಕಾನೂನಿನನ್ವಯ ಕ್ರಮ ಹಾಗೂ ಇಲಾಖಾ ವಿಚಾರಣೆಯನ್ನು ಜರುಗಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...