ಕಲಬುರಗಿ : ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ನಡುವೆ ಜೈಲಿನಲ್ಲಿ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದೆ . ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ನಂತರ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ಹಾಗೂ 10 ಸಾವಿರ ನಗದು ಹಾಗೂ 2 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.