alex Certify BIG NEWS : ರಾಜ್ಯದಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಕೆಲವು ಷರತ್ತಿಗೆ ಒಳಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಈ ಕಚೇರಿಯಿಂದ ಮಾರ್ಗದರ್ಶಿ/ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿಯೇ ಕೆಲವು ಜಿಲ್ಲಾ ಉಪನಿರ್ದೇಶಕರುಗಳು ಹುದ್ದೆ ಭರ್ತಿ ಅನುಮತಿ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಆಡಳಿತ ಮಂಡಳಿಗಳಿಗೆ / ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜ್ಞಾಪನ ನೀಡಿರುವುದು ಉಲ್ಲೇಖ (2) ರ ಪತ್ರದಿಂದ ತಿಳಿದು ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಉಲ್ಲೇಖ(1)ರ ಸರ್ಕಾರದ ಆದೇಶಕ್ಕೆ ಪೂರಕವಾಗಿ ಈ ಕಚೇರಿಯಿಂದ ಸುತ್ತೋಲೆ ಹೊರಡಿಸುವವರೆಗೆ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಯಾವುದೇ ಕ್ರಮ ವಹಿಸಬಾರದಾಗಿ ತಿಳಿಸಿದೆ. ತಪ್ಪಿದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...